December 23, 2024

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಅವರು ಗುರುವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ‌.ವೈ.ರಾಘವೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು