ಸಂಜೆ ಪ್ರಭ ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ರಾಮೋಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಬಿ.ಹೆಚ್.ಪ್ರಭು ರವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಕುಂಬಳಗೋಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಮಕೃಷ್ಣ (ಮಣ್ಣಿನಮಗ) ರವರು ಶುಭ ಕೋರಿದರು. ಕುಂಬಳಗೋಡು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಚಿಕ್ಕರಾಜು, ದೇವರಾಜು, ಆರ್.ಮುನಿರಾಜು, ಯಶೋದಮ್ಮ ಮುಂತಾದವರು ಉಪಸ್ಥಿತರಿದ್ದರು.