December 23, 2024

ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಮಹಾಲಕ್ಷ್ಮೀಪುರಂನ ಜನಹಿತ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಪ್ರಸಕ್ತ ಸಾಲಿನಲ್ಲಿ 4.34 ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿದೆ ಎಂದು ಸೊಸೈಟಿ ಅಧ್ಯಕ್ಷ ಮಹೇಂದ್ರಪ್ರಸಾದ್ ಗೌಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಸಂಘವು ನಗರದಲ್ಲಿ 4 ಶಾಖೆಗಳನ್ನು ಹೊಂದಿದೆ. ಸಂಘದ ಒಟ್ಟು ವಾರ್ಷಿಕ ವ್ಯವಹಾರ 290 ಕೋಟಿ ರೂಪಾಯಿ ದಾಟಿದೆ. ಮಂದಿನ ವರ್ಷದಲ್ಲಿ ಸಂಘವು 350 ಕೋಟಿ ರೂಪಾಯಿಗೂ ಮೀರಿ ವ್ಯವಹಾರ ನಡೆಸುವ ಗುರಿಯನ್ನು ಹೊಂದಲಾಗಿದೆ.
ಸದಸ್ಯರ ಅನುಕೂಲಕ್ಕಾಗಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸದಸ್ಯರ ಅನುಕೂಲಕ್ಕಾಗಿ ಸಹಕಾರಿ ಮೊಬೈಲ್ ಅಪ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸದಸ್ಯರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರದ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದರು.
60ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಮ್ಮ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ‌. ಸದಸ್ಯರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಘವು ಪ್ರಗತಿಯತ್ತ ಸಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.