ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ.ಮುಳೆ ಅವರು ಇಂದು ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಮುನಿರತ್ನ, ಸುನಿಲ್ ಕುಮಾರ್, ಸುರೇಶ್, ಮಾನಪ್ಪ ವಜ್ಜಲ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಹನುಮಂತ ನಿರಾಣಿ ಉಪಸ್ಥಿತರಿದ್ದರು.