December 24, 2024

ಉಡುಪಿ:  ವಿವಿಧ ಕಾರಣಗಳನ್ನು ನೀಡಿ ಪರಿಸರ ನಾಶ ಮಾಡುತ್ತಿರುವುದು ದುರದೃಷ್ಟಕರವಾಗಿದೆ ಎಂದು ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದರು.                                  

ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ.ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಬುಧವಾರ ಆಚರಿಸಿದ ಪರಿಸರ ದಿನಾಚರಣೆಉಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು. ನಾಗಬನಗಳ ಮೂಲಕ ಪರಿಸರ ಉಳಿಸುವ ಕಾರ್ಯ ನಿರಂತರವಾಗಿ ಮಾಡಿದ್ದರು. ನಾವೆಲ್ಲರೂ ಹೆಚ್ಚಿನ ಸಂಖ್ಯೆಗಳಲ್ಲಿ ಗಿಡ ನೆಟ್ಟು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ ಮಾತನಾಡಿ ನಮ್ಮ ಇಲಾಖೆಯ ಆವರಣದಲ್ಲಿ ಗಿಡ ನೆಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಇದನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಗಿಡಗಳನ್ನು ಈ ಪರಿಸರದಲ್ಲಿ ನೆಡುತ್ತೇವೆ ಎಂದರು.

ಎಂ.ಐ.ಟಿ ಮಣಿಪಾಲದ ನಿರ್ದೇಶಕ ಕಾಂ.ಅನಿಲ್ ರಾಣಾ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಐ.ಟಿ ಮಣಿಪಾಲದ ಜಂಟಿ ನಿರ್ದೇಶಕ ಡಾ.ಸೋಮಶೇಖರ್ ಭಟ್, ಭದ್ರತಾ ಅಧಿಕಾರಿ ರತ್ನಾಕರ ಸಾಮಂತ್, ಪ್ರಬಂಧಕ ರಾಮದಾಸ್, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ಬಾಲಕೃಷ್ಣ ಮದ್ದೋಡಿ, ನಮ್ಮಮನೆ ನಮ್ಮಮರ ತಂಡದ ಅವಿನಾಶ್ ಕಾಮತ್, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಗೌರವಾಧ್ಯಕ್ಲ ವಿಶ್ವನಾಥ್ ಶೆಣಿೈ, ಅಧ್ಯಕ್ಷರಾದ ಪ್ರೊ.ಶಂಕರ್, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾಧ೯ನ್ ಕೊಡವೂರು, ಕಲಾವಿದೆ ಪದ್ಮಾಸಿನಿ ಉದ್ಯಾವರ, ಕಸಾಪ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು‌ ಮುಂತಾದವರು ಉಪಸ್ಥಿತರಿದ್ದರು.