December 23, 2024


ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪದಗ್ರಹಣ ಮಾಡುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂಭ್ರಮಾಚರಣೆ ನಡೆಯಿತು.
ಭಾರತ್ ಮಾತಾ ಕೀ ಜೈ, ಜನಮೆಚ್ಚಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.

ಜೈ ಶ್ರೀರಾಂ, ಜೈ ಜೈ ಮೋದಿ ಘೋಷಣೆಗಳನ್ನು ಕೂಗಿದರು. ಬಿಜೆಪಿ ಧ್ವಜಗಳನ್ನು ಬೀಸುತ್ತ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು. ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಲಾಯಿತು.
ಬೃಹತ್ ಪರದೆಯಲ್ಲಿ ಪ್ರಮುಖರು ಮತ್ತು ಕಾರ್ಯಕರ್ತರು ಈ ಕಾರ್ಯಕ್ರಮವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಜಗನ್ನಾಥ ಭವನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.