ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ 2022-23ನೇ ಸಾಲಿನಲ್ಲಿ ನಡೆಸಿದ ಎಂ.ಎಸ್ಸಿ (ರಸಾಯನಶಾಸ್ತ್ರ) ಸ್ನಾತಕೋತ್ತರ ಪರೀಕ್ಷೆಯಲ್ಲಿ
8.65 (ಸಿಜಿಪಿಎ) ಗಳಿಸಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಗಳಿಸಿದ, ಉಡುಪಿಯ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಸಯ್ಯದ್ ರೇಹಾ ಖಾದ್ರಿ ರವರಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್, ಮುಸ್ತಫಾ ಎ.ಕೆ, ತಂಝೀಮ್ ಶಿರ್ವ, ವೀಣಾ ಎಚ್ ಹಾಗೂ ಪೋಷಕರು ಉಪಸ್ಥಿತರಿದ್ದರು.