December 23, 2024

ಸಂಜೆ ಪ್ರಭ ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಚುನಾಯಿತರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಶ್ರೀವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ದೇವಸ್ಥಾನದ ಆಡಳಿತ ಮಂಡಲಿಯಿಂದ ನೂತನ ಸಂಸದರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಯು.ನಂದನ್ ಮಲ್ಯ ಹಾಗೂ ದೇವಸ್ಥಾನದ ಆಡಳಿತ ಮಂಡಲಿಯವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *