ಕಾರ್ಕಳ: ಸಾಹಿತ್ಯ, ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ.ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ “ಡಾ.ಶೇಖರ ಅಜೆಕಾರು” ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಷರೀಫ್ ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು. ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು ಯಾ ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ರಜತ ಫಲಕ ಒಳಗೊಂಡಿರುತ್ತದೆ. ಸ್ವವಿವರ ಹಾಗೂ ಇತ್ತೀಚಿನ ಭಾವಚಿತ್ರವನ್ನೊಳಗೊಂಡ ಅರ್ಜಿಯನ್ನು ಮೊಹಮ್ಮದ್ ಶರೀಫ್ ಅಧ್ಯಕ್ಷರು, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್ ಕುಕ್ಕುಂದೂರು, ಕಾರ್ಕಳ ತಾಲೂಕು- 576117 ಇವರಿಗೆ ಜೂ.21ರೊಳಗೆ ಕಳುಹಿಸಿಕೊಡಬಹುದಾಗಿದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.