ಹಾಸನ: “ಹಾಸನ ವಾಣಿ” ದಿನ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಎ.ವಿ.ಮುರಳಿ (54)
ಯವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಸೋಮವಾರ ಮದ್ಯರಾತ್ರಿ ನಿಧನರಾದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ತಾಯಿ, ಪತ್ನಿ ಒರ್ವ ಪುತ್ರಿ ಸೇರಿದಂತೆ ಮಾಧ್ಯಮ ಸ್ನೇಹಿತರುಗಳನ್ನು ಅಗಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಇವರು ಜಾತ್ಯಾತೀತ ವ್ಯಕ್ತಿತ್ವದ ಇವರು ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಹಾಸನ ವಾಣಿ ಪತ್ರಿಕೆಯ ಸಂಪಾದಕರಾದ ಹೆಚ್.ಆರ್.ಲೀಲಾವತಿ ಯವರ ಮಗನಾದ ಇವರು “ಹಾಸನ ವಾಣಿ” ದಿನ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಇವರ ಪಾರ್ಥಿವ ಶರೀರವನ್ನು ಕುವೆಂಪು ನಗರ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಇಂದು ಸಂಜೆ ನಗರದ ಬಿಟ್ಟಗೌಡನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು,
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮದನ್ ಗೌಡ, ವಿಶೇಷ ಆಹ್ವಾನಿತ ಸದಸ್ಯ ರವಿನಾಕಲಗೂಡು, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೇಣು ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಸಿ ಶಶಿಧರ್, ನಿಕಟಪೂರ್ವ ಅಧ್ಯಕ್ಷ ಬಾಳ್ಳುಗೋಪಾಲ್, ಕಾರ್ಯದರ್ಶಿ ಮಂಜು ಬನವಾಸೆ, ಕಸಾಪ ಜಿಲ್ಲಾಧ್ಯಕ್ಷ ಮಲ್ಲೇಶ್ ಗೌಡ, ಗೌರವ ಪ್ರಧಾನ ಕಾರ್ಯದರ್ಶಿಗಳಾದ ಬೊಮ್ಮೇಗೌಡ, ಜಾವಗಲ್ ಪ್ರಸನ್ನ ಕುಮಾರ್, ನಿಕಟಪೂರ್ವ ಅಧ್ಯಕ್ಷ ಡಾ.ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ವಚನ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಚೈತ್ರ ನಾಯಕರಹಳ್ಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.