ಕೆಜಿಎಫ್: ಕೆಜಿಎಫ್ ಪೊಲೀಸ್ ಜಿಲ್ಲೆಯ ಪೊಲೀಸರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶೇಷ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬೇತಮಂಗಲ ಪಿಎಸ್‍ಐ ಗುರುರಾಜ್ ಚಿಂತಾಕಲ ರವರು ಗ್ರಾಮೀಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ರಾಬರ್ಟ್ ಸನ್ ಪೇಟೆ ಪಿಎಸ್‍ಐ ಯತೀಶ್ ರವರು ವಾಣಿ ಶಾಲೆಯ ವಿದ್ಯಾರ್ಥಿಗಳಿಗೆ, ಉರಿಗಾಂ ಪಿಎಸ್‍ಐ ರಾಜೇಶ್ವರಿ ರವರು ಬಿಜಿಎಂಎಲ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪೊಕ್ಸೋ ಕಾಯ್ದೆ, ಸೈಬರ್ ಅಪರಾಧ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಿದರು.
ಆಂಡ್ರಸನ್‍ಪೇಟೆ ಪಿಎಸ್‍ಐ ಚೇತನ್ ಕುಮಾರ್ ರವರು ಸೇಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿಗಳಿಗೆ, ಕ್ಯಾಸಂಬಳ್ಳಿ ಪಿಎಸ್‍ಐ ಸಂಗಮೇಶ್ ಕಲ್ಹೋರ ರವರು ವೇಮನ ಶಾಲೆಯ ವಿದ್ಯಾರ್ಥಿಗಳಿಗೆ, ಬಂಗಾರಪೇಟೆ ಪಿಎಸ್‍ಐ ಭಾಗ್ಯಲಕ್ಷ್ಮಿ ರವರು ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ, ಬೂದಿಕೋಟೆ ಪಿಎಸ್‍ಐ ಸುನಿಲ್ ಪುಂಡಲಿಂಗ ಐರೋಡಗಿ ರವರು ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಕಾಮಸಮುದ್ರಂ ಪಿಎಸ್‍ಐ ಪಾಲಾಕ್ಷಪ್ರಭು ರವರು ಸರ್ಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಸೈಬರ್ ಅಪರಾಧ, ಮಾಧಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು.
ಮಾದಕ ವಸ್ತುಗಳಿಂದ ಆಗುವಂತಹ ಅನಾಹುತಗಳ ಬಗ್ಗೆ, ಪೋಕ್ಸೋ ಕಾಯ್ದೆಯ ಕುರಿತು, ಬಾಲ್ಯ ವಿವಾಹ ನಿರ್ಮೂಲನೆ, ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು ಮೂಡಿಸಿದರು. ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಇದೇ ಸಂದರ್ಭದಲ್ಲಿ ವಿವರಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ತಿಳುವಳಿಕೆ ನೀಡಿದರು.