ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಪೆರಂಪಳ್ಳಿ ಇವರ ಸಹಯೋಗದಲ್ಲಿ ಸ್ತೀ ಶಕ್ತಿ ಗುಂಪಿನ ಸದಸ್ಯರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರವು ಜೂನ್ 12 ಮತ್ತು 13 ರಂದು ಬೆಳಗ್ಗೆ 9.30 ರಿಂದ ಸಂಜೆ 5 ರ ವರೆಗೆ ನಗರದ ಪೆರಂಪಳ್ಳಿಯ ಭಾರತೀಯ ವಿಕಾಸ ಟ್ರಸ್ಟ್ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜೂ. 12 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದು, ಪೆರಂಪಳ್ಳಿ ಭಾರತೀಯ ವಿಕಾಸ ಟ್ರಸ್ಟ್ ನ ಹಿರಿಯ ಸಲಹೆಗಾರ ಸಿ.ಜಗದೀಶ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ನಿರ್ದೇಶಕಿ ಪ್ರೊ.ಡಾ.ನಿರ್ಮಲಾ ಕುಮಾರಿ ಕೆ, ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ರಾಮರಾವ್, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದಾರೆ.