December 24, 2024

ಬೆಂಗಳೂರು: ಸುಶಿಕ್ಷಿತರಾದ ನಾವು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಶ್ರಮಿಸೋಣ ಎಂದು ಆರ್.ಟಿ.ನಗರದ ಕನಕ ನಗರದಲ್ಲಿರುವ ನೆಹರು ಸೆಂಟನರಿ ಆಂಗ್ಲ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯಿನಿ ಪದ್ಮಾವತಿ ಕೆ.ವಿ. ಹೇಳಿದರು.

ಶಾಲೆಯಲ್ಲಿ ನಡೆದ “ವಿಶ್ವ ಬಾಲಕಾರ್ಮಿಕ ವಿರೋಧಿ” ದಿನಾಚರಣೆಯಲ್ಲಿ ಅವರು ಮಾತನಾಡಿದರು. ಬಾಲ್ಯದಲ್ಲಿ ಆಟವಾಡುತ್ತಾ ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇದೊಂದು ಸಾಮಾಜಿಕ ಪಿಡುಗು. ಇದರಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದಾದ್ಯಂತ “ಬಾಲಕಾರ್ಮಿಕ ವಿರೋಧಿ ದಿನ”ವನ್ನು ಆಚರಿಸಲಾಗುತ್ತದೆ. ಮಕ್ಕಳು ಕೆಲಸ ಮಾಡುವ ಬದಲು ಶಿಕ್ಷಣ ಪಡೆಯುವಂತೆ ಪ್ರೋತ್ಸಾಹಿಸೋಣ ಎಂದು ಹೇಳಿದರು.

ಪ್ರೌಢಶಾಲಾ ವಿದ್ಯಾರ್ಥಿಗಳು ಭಿತ್ತಿ ಪತ್ರ ಘೋಷಣೆಗಳ ಮೂಲಕ ಶಾಲೆಯಿಂದ ಹೊರಟು ಕನಕ ನಗರದ ಮುಖ್ಯರಸ್ತೆಯಲ್ಲಿ ಬಸ್ ನಿಲ್ದಾಣ, ಭುವನೇಶ್ವರಿ ನಗರ, ನಾಗೇನಹಳ್ಳಿ ಚರ್ಚ್ ಬಳಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಜಾಥಾದಲ್ಲಿ ವಿದ್ಯಾರ್ಥಿಗಳ ಜೊತೆ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯಿನಿ ಪದ್ಮಾವತಿ ಕೆ.ವಿ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.


Leave a Reply

Your email address will not be published. Required fields are marked *