ತಿಪಟೂರು: ತುಮಕೂರು ಲೋಕಸಭಾ ಕ್ಷೇತ್ರದ ಸಂಸದರು, ಕೇಂದ್ರದ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣನವರು, ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ತಿಪಟೂರು ತಾಲೂಕಿನ ದೇವಾಲಯ ಹಾಗೂ ಮಠಗಳಿಗೆ ಭೇಟಿ ನೀಡಲು ಹಾಗೂ ತಮ್ಮನ್ನು ಚುನಾವಣೆಯಲ್ಲಿ ಗೆಲ್ಲಿಸಿದ ಮತದಾರರನ್ನು ಭೇಟಿ ಮಾಡಲು ನಾಳೆ ಶುಕ್ರವಾರ ಮಧ್ಯಾಹ್ನ 1.00 ಗಂಟೆಗೆ ತಿಪಟೂರು ನಗರಕ್ಕೆ ಆಗಮಿಸಲಿದ್ದಾರೆ ಎಂದು ಸಚಿವರ ಮಾಧ್ಯಮ ಪ್ರಕಟಣೆ ತಿಳಿಸಿದೆ.