ಮಂಗಳೂರು: ಮೀನುಗಾರಿಕೆ ಇಲಾಖೆ, ಮಂಗಳೂರು, ಪ್ರಾದೇಶಿಕ ರಕ್ತಪೂರಣ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ “ವಿಶ್ವ ರಕ್ತದಾನಿಗಳ ದಿನಾಚರಣೆ”ಯ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.
ಮೀನುಗಾರಿಕೆ ಅಪರ ನಿರ್ದೇಶಕರಾದ ಹರೀಶ್ ಕುಮಾರ್ ರವರು
ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಗಳೂರು
ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿಗಳಾದ
ಡಾ.ಶರತ್ ಕುಮಾರ್, ಮೀನುಗಾರಿಕೆ ಜಂಟಿ ನಿರ್ದೇಶಕ ಸಿದ್ದಯ್ಯ, ಮೀನುಗಾರಿಕೆ ಉಪನಿರ್ದೇಶಕರಾದ ಶ್ರೀಮತಿ ರೇವತಿ ಜೆ, ಶ್ರೀಮತಿ ದಿವ್ಯಾ ಬಿ.ಎಲ್, ಮೀನುಗಾರಿಕೆ ಉಪ ನಿರ್ದೇಶಕರು (ಪ್ರ) ದಿಲೀಪ್ ಕುಮಾರ್, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಶ್ರೀಮತಿ ಶ್ರೀದೇವಿ ಪ್ರಭು, ಶ್ರೀಮತಿ ಕವಿತಾ, ದಿವಾಕರ ಖಾರ್ವಿ ಹಾಗೂ ಮೀನುಗಾರಿಕೆ ಇಲಾಖೆಯ ಸಿಬ್ಬಂದಿಗಳು, ರಕ್ತದಾನಿಗಳು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಂಗಳೂರು ಬಂದರು
ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ದಿವಾಕರ ಖಾರ್ವಿಯವರು 80ನೆಯ ಬಾರಿ ಹಾಗೂ ವಾಹನ ಚಾಲಕರಾದ ಯೋಗೇಶ್ ದೇವಾಡಿಗ 52ನೇ ಬಾರಿ ರಕ್ತದಾನವನ್ನು ಮಾಡಿದರು. ಒಟ್ಟು 52 ದಾನಿಗಳು ರಕ್ತದಾನವನ್ನು ಮಾಡಿದರು.