ಬೆಂಗಳೂರು: ನಾಡ ಪ್ರಭು ಕೆಂಪೇಗೌಡರ 515ನೇ ಜಯಂತಿಯ ಅಂಗವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಹಾಗೂ ಕೆಂಪೇಗೌಡರ ಸೂಸೆ ಮಹಾತ್ಯಾಗಿ ಲಕ್ಷ್ಮಿದೇವಿ ಯವರ ಪ್ರತಿಮೆಗಳಿಗೆ ಬಿಬಿಎಂಪಿಯ ಆಡಳಿತಗಾರರಾದ ಎಸ್.ಆರ್.ಉಮಾಶಂಕರ್
ಮಾಲಾರ್ಪಣೆ ಹಾಗೂ ಪುಷ್ಪನಮನ ಅರ್ಪಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸೂರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಪ್ರತಿಭಾ, ಲಕ್ಷ್ಮೀದೇವಿ, ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ಮುಂತಾದವರು ಉಪಸ್ಥಿತರಿದ್ದರು.