ಕಾರ್ಕಳ: ಕೃಷಿ ಚಟುವಟಿಕೆಗಳು ದೊಡ್ಡ ಮಟ್ಟದಲ್ಲಿ ವಿಸ್ತಾರವಾಗಬೇಕು. ಹೊಸ ಪೀಳಿಗೆಗೆ ಕೃಷಿಯ ಬಗ್ಗೆ ಅರಿವು ಮೂಡಿಸಬೇಕು ಮತ್ತು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಸೊಗಡನ್ನು ಉಳಿಸುವ ಪ್ರಯತ್ನವನ್ನು ಮಾಡಬೇಕಾಗಿದೆ ಎಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ಬೋಳ ಪಾಲಿಂಗೇರಿ ಗದ್ದೆಯಲ್ಲಿ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ “ಹೋ.. ಬೇಲೆ… ಭತ್ತ ನಾಟಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಪವರ್ ಲಿಫ್ಟಿಂಗ್ ಚಿನ್ನದ ಪದಕ ವಿಜೇತೆ ಅಂತರಾಷ್ಟ್ರೀಯ ಕ್ರೀಡಾಪಟು ಬೋಳ ಅಕ್ಷತಾ ಪೂಜಾರಿ ಹಾಗೂ ಕೃಷಿ ಸಾಧಕರಾದ ಯಶೋಧ ಸಾಲ್ಯಾನ್ ಮತ್ತು ಜಾನಕಿ ಅವರನ್ನು ಸನ್ಮಾನಿಸಲಾಯಿತು.ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಸಾಲ್ಯಾನ್, ಮಹಾವೀರ ಹೆಗ್ಡೆ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರೇಷ್ಮಾ ಶೆಟ್ಟಿ, ಬೆಳ್ಮಣ್ ಶಕ್ತಿಕೇಂದ್ರದ ಅಧ್ಯಕ್ಷ ದೇವೇಂದ್ರ ಶೆಟ್ಟಿ, ಬಿಜೆಪಿ ಮುಖಂಡ ರವೀಂದ್ರ ಕುಮಾರ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಮಾ ರವಿಕಾಂತ್, ವಿನುತ ಆಚಾರ್ಯ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಪುಷ್ಪ ಸತೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯ ಡಿ.ಬಂಗೇರ ಸ್ವಾಗತಿಸಿದರು.