December 23, 2024

ಬೆಂಗಳೂರು: ಗುರಿ ಮತ್ತು ಗುರು ಇದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ಜಯನಗರದ ಕಿತ್ತೂರು ರಾಣಿ ಚನ್ನಮ್ಮ ಆಟದ ಮೈದಾನದಲ್ಲಿ 27ನೇ ರಾಜ್ಯ ಮಟ್ಟದ ಅಂತರ್ ಶಾಲಾ ಬಾಲಕ-ಬಾಲಕಿಯರ “ಬಾಂದವ ಕಪ್-2024” ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಗುರುವಾದವರು ಮಕ್ಕಳಿಗೆ ಶಿಕ್ಷಣದಲ್ಲಿ ಉತ್ತಮ ಪಾಠವನ್ನು ಹೇಳಿ ಕೊಡುತ್ತಾರೆ. ಹಾಗೆಯೇ ಯುವ ಕ್ರೀಡಾಪಟುಗಳಿಗೆ ಗುರುವಾಗಿ ಮಾರ್ಗದರ್ಶನ ನೀಡಿದಾಗ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ.
ಶಿಕ್ಷಣ ಮತ್ತು ಕ್ರೀಡಾ ಚಟುವಟಿಕೆಗಳು ಮಕ್ಕಳಿಗೆ ಸಿಗಬೇಕು. ಆಗ ಮಾತ್ರ ಸದೃಢ ದೇಶ ನಿರ್ಮಾಣ ಮಾಡಲು ಸಾಧ್ಯ.
ವೀಡಿಯೊ ಗೇಮ್, ಮೊಬೈಲ್ ನೋಡುವುದು ಬಿಟ್ಟು ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಾಜ್ಯ ಸರ್ಕಾರ ಎಲ್ಲಾ ಕ್ರೀಡೆಗಳಿಗೆ ಸಹಕಾರ, ಪ್ರೋತ್ಸಾಹ ನೀಡುತ್ತಿದೆ. ಸರ್ಕಾರಿ ಉದ್ಯೋಗ ಸಹ ಕಲ್ಪಿಸುತ್ತಿದೆ. ಚಿಕ್ಕ ವಯಸ್ಸಿನಲ್ಲಿ ಕ್ರೀಡೆಗಳಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಸಹಕಾರ ನೀಡಿದಾಗ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುವಾಗಿ ಬೆಳೆಯಲು ಸಾಧ್ಯ. ಬಾಂದವ ಸಂಸ್ಥೆ ಈ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದರು.

ಬಾಂದವ ಅಧ್ಯಕ್ಷರು ಹಾಗೂ ಜಯನಗರ ವಿಧಾನಸಭಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಎನ್.ನಾಗರಾಜು, ಮಾತನಾಡಿ ಬಾಂದವ ಸಾಮಾಜಿಕ ಸೇವಾ ಸಂಘಟನೆ ಶಿಕ್ಷಣ, ಆರೋಗ್ಯ, ಕ್ರೀಡೆ ಮತ್ತು ಪರಿಸರ ಕುರಿತು ಸೇವೆ ಮಾಡುತ್ತಿದೆ. ಸಚಿವರಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಕ್ರೀಡಾಂಗಣವನ್ನು ಅಂತರಾಷ್ಟ್ರೀಯ ಕ್ರೀಡಾಂಗಣ ಮಾದರಿಯಲ್ಲಿ ನಿರ್ಮಾಣಮಾಡಲಾಗಿದೆ.
ನಮ್ಮ ರಾಜ್ಯದ ಯುವ ಕ್ರೀಡಾಪಟುಗಳಿಗೆ ಅಂತರಾಷ್ಟ್ರೀಯ ಕ್ರೀಡಾಪಟುಗಳಾಗಿ ರೂಪಿಸಲು ಬಾಂದವ ಸೇವಾ ಸಂಘಟನೆ ಪ್ರೋತ್ಸಾಹ, ಸಹಕಾರ ನೀಡುತ್ತಿದೆ. ಕ್ರೀಡಾ ಚಟುವಟಿಕೆಗಳಿಂದ ಧೈಹಿಕ ಮತ್ತು ಮಾನಸಿಕವಾಗಿ ಶಕ್ತಿವಂತರಾಗಿ ಇರಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸೌಮ್ಯರೆಡ್ಡಿ, ವಿಧಾನಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ರಾಮೋಜಿಗೌಡ, ಡಿ.ಟಿ.ಶ್ರೀನಿವಾಸ್, ಪದ್ಮನಾಭನಗರ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಉಪಸ್ಥಿತರಿದ್ದರು.
ಮೂರು ದಿನಗಳ ಕಾಲ ವಾಲಿಬಾಲ್ ಪಂದ್ಯಾವಳಿ ಜರುಗಲಿದೆ. 150 ಶಾಲೆಗಳ 3000 ಮಕ್ಕಳು ಭಾಗವಹಿಸಲಿದ್ದಾರೆ. 16ವಿಭಾಗಗಳಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಲಿದೆ.


Leave a Reply

Your email address will not be published. Required fields are marked *