ತುಮಕೂರು: ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪುಣ್ಯಕ್ಷೇತ್ರ ಶ್ರೀಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಪರಮಪೂಜ್ಯ ಲಿಂಗೈಕ್ಯ ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಗಳವರ ಗದ್ದುಗೆಗೆ ಪೂಜೆ ಸಲ್ಲಿಸಿದರು.ನಂತರ
ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀಶ್ರೀಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತುಮಕೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜ್ಯೋತಿ ಗಣೇಶ್, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಗೌಡ ಹಾಗೂ ಮುಖಂಡರು ಉಪಸ್ಥಿತರಿದ್ದರು.