ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೆರಿಸಲು ನಗರಾಭಿವೃದ್ದಿ ಸಚಿವರು ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಖುದ್ದಾಗಿ ಭೇಟಿ ಮಾಡಿ ಮತ್ತು ಹಲವಾರು ಬಾರಿ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಸಹ ಸಕರಾತ್ಮಕವಾಗಿ ಸ್ಪಂದಿಸದೆ ಇರುವುದರಿಂದ ಕರ್ನಾಟಕ ರಾಜ್ಯ ವ್ಯಾಪ್ತಿಯಲ್ಲಿರುವ 10 ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸಂಪೂರ್ಣವಾಗಿ ಬಂದ್ ಮಾಡುವ ಬಗ್ಗೆ ಚರ್ಚಿಸಿ/ ತೀರ್ಮಾನಿಸಲು ದಿನಾಂಕ: 06-08-2024 ರಂದು ಬೆಳಿಗ್ಗೆ 11: 00 ಗಂಟೆಗೆ ಬೆಂಗಳೂರು ನಗರದ ವಿ.ಟಿ ಪ್ಯಾರಡೈಸ್ ಹೋಟೆಲ್ನಲ್ಲಿ ತುರ್ತು ಸಭೆಯನ್ನು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ, ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘ, ಹುಬ್ಬಳಿ- ಧಾರವಾಡ ಮಹಾನಗರ ಪಾಲಿಕೆ ನೌಕರರ ಸಂಘ, ಬೆಳಗಾಂ ಮಹಾನಗರ ಪಾಲಿಕೆ ನೌಕರರ ಸಂಘ, ಬಳ್ಳಾರಿ ಮಹಾನಗರ ಪಾಲಿಕೆ ನೌಕರರ ಸಂಘ, ಗುಲ್ಬಾರ್ಗ ಮಹಾನಗರ ಪಾಲಿಕೆ ನೌಕರರ ಸಂಘ, ಎಸ್.ಕೆ ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ ನೌಕರರ ಸಂಘ ಮಂಗಳೂರು, ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ, ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘ ತುಮಕೂರು ಮಹಾನಗರ ಪಾಲಿಕೆ ನೌಕರರ ಸಂಘ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚೆ:
1) ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಾಮವಳಿ ತಿದ್ದುಪಡಿ ಬಗ್ಗೆ.
2) ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವಂತೆ ಆರೋಗ್ಯ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೆ ಜಾರಿಮಾಡುವ ಬಗ್ಗೆ
3) ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಮಾಡಿರುವಂತೆ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಯೋಜನೆಯನ್ನು ಜಾರಿ ಮಾಡುವ ಬಗ್ಗೆ ,
4) ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷವೂ ಕ್ರೀಡಾಕೂಟಗಳನ್ನು ಏರ್ಪಡಿಸುವ ಮಾದರಿಯಲ್ಲೇ ಮಹಾನಗರ ಪಾಲಿಕೆ ನೌಕರರಿಗೆ ಕ್ರೀಡಾಕೂಟಗಳನ್ನು ಏರ್ಪಡಿಸುವ ಬಗ್ಗೆ ಹಾಗೂ ಇತರೆ ಪ್ರಮುಖ ವಿಷಯಗಳ ಚರ್ಚೆ ನಡೆಯಲಿದೆ.