January 12, 2025 7:11:52 AM

ಬೆಂಗಳೂರು: ದೇಶದ ಐಕ್ಯತೆ, ಏಕತೆ ಸಮಗ್ರತೆಗಾಗಿ ಸಂವಿಧಾನ ರಕ್ಷಣೆ ಮಾಡೋಣ ಎಂದು
ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ
ಹೆಚ್.ಎಸ್.ಮಂಜುನಾಥ್ ಗೌಡ ಹೇಳಿದರು.
ಇಂದು ಕಾಂಗ್ರೆಸ್ ಭವನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ರವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. 
ದೇಶ ಸ್ವಾತಂತ್ರ್ಯ ಲಭಿಸಲು ಯುವಕ, ಯುವತಿಯರು ಮಹತ್ವವಾದ ಪಾತ್ರ ವಹಿಸಿದರು.


ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಪಾಲ್ಗೊಂಡಿರುವ ಹೆಮ್ಮೆಯ ಸಂಗತಿಯಾಗಿದೆ. ದೇಶದ ಐಕ್ಯತೆ, ಏಕತೆ, ಸಮಗ್ರತೆ ಸಂವಿಧಾನ ರಕ್ಷಣೆಗಾಗಿ ಪಣ ತೊಡೋಣ.
ಮಹಾತ್ಮ ಗಾಂದಿಜೀ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಇಂದಿನ ಯುವ ಸಮೂಹ ಸಾಗಬೇಕು. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಕುಟುಂಬಗಳಿಗೆ ಯೋಜನೆಯ ಲಾಭ ಲಭಿಸಿದೆ. ಯುವ ಸಮೂಹಕ್ಕೆ ಕಾಂಗ್ರೆಸ್ ಪಕ್ಷ ಹೆಚ್ಚು ಸಹಕಾರ, ಬೆಂಬಲ ನೀಡುತ್ತಿದೆ. ಇಂದಿನ ಯುವ ಸಮೂಹವೇ ದೇಶದ ಸಂಪತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ನೂರಾರು ಪದಾಧಿಕಾರಿಗಳು ಭಾಗವಹಿಸಿದ್ದರು.


Leave a Reply

Your email address will not be published. Required fields are marked *