ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನ. 9 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದ ನಯನ ಸಭಾಂಗಣದಲ್ಲಿ ನಡೆಯಲಿರುವ ಕನ್ನಡೋತ್ಸವ ಮತ್ತು ದಸರೋತ್ಸವ ಕಾರ್ಯಕ್ರಮದಲ್ಲಿ ನಾಡಿನ ಸಾಂಸ್ಕೃತಿಕ ರಂಗದ ಹಿರಿಯ ಚೇತನ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀಧರ್ ರವರಿಗೆ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಪುರಸ್ಕರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಗುಣವಂತ ಮಂಜು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಂದಿನ ಕಾರ್ಯಕ್ರಮದಲ್ಲಿ
ಶಿವಗಂಗೆಯ ಮೇಲಣಗವಿ ಮಠದ ಷ.ಬ್ರ. ಶ್ರೀಶ್ರೀಶ್ರೀ ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ಸಂಜೆ ಪ್ರಭ ಪತ್ರಿಕೆಯ ಸಂಪಾದಕ ವೆಂಕಟೇಶ ಪೈ ಮುಂತಾದವರು ಭಾಗವಹಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.