ಉಡುಪಿ: ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡರವರು ಸೋಮವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಸರ್ವಜ್ಞ ಪೀಠದಲ್ಲಿ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾರ್ಕೆಟಿಂಗ್ ಮುಖ್ಯ ವ್ಯವಸ್ಥಾಪಕ ಉಲ್ಲಾಸ ಗುನಗಾ, ರೀಜನಲ್ ವ್ಯವಸ್ಥಾಪಕ ವಿಜಯ್ ದೋತಿಹಾಲ್, ಉಡುಪಿ ಶಾಖೆಯ ಹಿರಿಯ ವ್ಯವಸ್ಥಾಪಕ ರಾಘವೇಂದ್ರ ಉಪಾಧ್ಯ ಉಪಸ್ಥಿತರಿದ್ದರು.