ಬೆಂಗಳೂರು: ಮೈಸೂರು ರಸ್ತೆಯ ರಾಜರಾಜೇಶ್ವರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಅಂಗ ಸಂಸ್ಥೆಯಾದ ರಾಜರಾಜೇಶ್ವರಿ ದಂತವೈದ್ಯಕೀಯ ಮಹಾವಿದ್ಯಾಲಯದಲ್ಲಿ 28ನೇ ಘಟಿಕೋತ್ಸವವು ದಿ 11-12-2024 ರ ಬುಧವಾರ ಕಾಲೇಜಿನ ಆವರಣದ ಎಸಿಎಸ್ ಕನ್ವೆನ್ಷನ್ ಹಾಲ್ ನಲ್ಲಿ ಸಾಂಸ್ಕೃತಿಕ ಸಂಭ್ರಮಗಳ ನಡುವೆ ದಂತ ವೈದ್ಯಕೀಯ ಪದವೀಧರರಿಗೆ ಪದವಿ ಪ್ರಧಾನ ಮಾಡಲಾಗುವುದು.
ಘಟಿಕೋತ್ಸವ ಕಾರ್ಯಕ್ರಮವು ರಾಜರಾಜೇಶ್ವರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಸಂಸ್ಥಾಪಕ ಕುಲಪತಿ ಡಾ.ಎ.ಸಿ.ಷಣ್ಮುಗಂ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕಲಪತಿ ಡಾ.ಎಂ.ಕೆ. ರಮೇಶ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ದಂತ ವೈದ್ಯಕೀಯ ಮಹಾವಿದ್ಯಾಲಯದ 32ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜರಾಜೇಶ್ವರಿ ಸಮೂಹ ಸಂಸ್ಥೆಗಳ ಟ್ರಸ್ಟಿ ಶ್ರೀಮತಿ ಲಲಿತಾ ಲಕ್ಷ್ಮಿ, ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಚಲನಚಿತ್ರನಟಿ ಅಪೂರ್ವ ಭಾಗವಹಿಸಲಿದ್ದಾರೆ.
ಸಮೂಹ ಸಂಸ್ಥೆಗಳ ಕಾರ್ಯಕಾರಿ ನಿರ್ದೇಶಕ ಡಾ.ವಿಜಯಾನಂದ, ಮಹಾವಿದ್ಯಾಲಯದ ಡೀನ್ ಡಾ.ಎಡ್ವಿನ್ ದೇವರಾಜ್, ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಹೆಚ್ ಸೇರಿದಂತೆ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಲಿದ್ದಾರೆ.