December 23, 2024

ಬೆಂಗಳೂರು: ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ “ಸರಿಗಮಪ” ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ.

ಈಗಾಗಲೇ ಸರಿಗಮಪ ಶೋ ಕನ್ನಡ ಚಿತ್ರರಂಗಕ್ಕೆ ಸಂಜಿತ್ ಹೆಗ್ಡೆ, ಪೃಥ್ವಿಭಟ್ ಮತ್ತು ಜಸ್ಕರಣ್ ಸಿಂಗ್, ಐಶ್ವರ್ಯ ರಂಗರಾಜನ್, ಆಶಾಭಟ್, ಹನುಮಂತು, ದಿಯಾ ಹೆಗ್ಡೆ, ಶ್ರೀನಿಧಿಶಾಸ್ತ್ರೀ, ಚೆನ್ನಪ್ಪ, ಸುನೀಲ್ ಗುಜಗೊಂಡ, ಸುಹಾನಾ,ರಜತ್ ಹೆಗ್ಡೆ, ಹರ್ಷ, ದರ್ಶನ್, ಕಂಬದ ರಂಗಯ್ಯ, ಇಂಪನಾ ಜಯರಾಜ್, ಜ್ಞಾನಗುರುರಾಜ್, ಸುಪ್ರೀತ್, ನಿಹಾಲ್, ಅಶ್ವಿನ್ ಶರ್ಮ ರಂತಹ ಪ್ರತಿಭಾವಂತ ಗಾಯಕರನ್ನು ಕೊಡುಗೆಯಾಗಿ ನೀಡಿದೆ. ಈ ಸೀಸನ್ನಲ್ಲಿ 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸಬಹುದಾಗಿದ್ದು ಸ್ಪರ್ಧೆಯು ಮತ್ತಷ್ಟು ಇಂಟೆರೆಸ್ಟಿಂಗ್ ಆಗುವುದರಲ್ಲಿ ಯಾವುದೇ ಡೌಟಿಲ್ಲ.

ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಜೊತೆ ರಾಜೇಶ್ ಕೃಷ್ಣನ್ ಮತ್ತೆ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿರುವುದು ಈ ಆವೃತ್ತಿಯ ಮತ್ತೊಂದು ಹೈಲೈಟ್ ಆಗಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಈ ಸೀಸನ್ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ಶೋನಲ್ಲಿ ಸ್ಪರ್ಧಿಗಳ ನಡುವೆ ಕೇವಲ ಪೈಪೋಟಿ ಮಾತ್ರವಿರದೇ ಅವರ ಸ್ಪೂರ್ತಿದಾಯಕ ಕಥೆಗಳು ಕೂಡ ನಿಮನ್ನು ಮತ್ತಷ್ಟು ಪ್ರೇರೇಪಿಸಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಮತ್ತು ದೇಶದ ಹಲವು ಭಾಗಗಳಿಂದ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವೀಕ್ಷಕರು ಜೀ಼ಕನ್ನಡ “ಸರಿಗಮಪ” ಇನ್ಸ್ಟಾಗ್ರಾಂ ನ ಅಧಿಕೃತ ಪೇಜ್ ನಲ್ಲಿ ಪೋಸ್ಟ್ ಮಾಡುವ ಆಡಿಷನ್ ವೀಡಿಯೋಗಳನ್ನು ಲೈಕ್ ಮಾಡುವ ಮೂಲಕ ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಆಯ್ಕೆಮಾಡಿದ್ದಾರೆ. ಹಾಗೆಯೇ ಅತೀ ಹೆಚ್ಚು ಲೈಕ್ ಗಳಿಸಿರುವ ಸ್ಪರ್ಧಿಗಳು ಮೆಗಾ ಎಡಿಷನ್ ಗೆ ಬಡ್ತಿ ಪಡೆದಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಹಲವಾರು ಹಿಟ್
ಗಾಯಕರನ್ನು ನೀಡಿರುವ ಈ “ಸರಿಗಮಪ” ಸಿಂಗಿಂಗ್ ರಿಯಾಲಿಟಿ ಶೋ ಮತ್ತಷ್ಟು ಹೊಸತನದೊಂದಿಗೆ ನಿಮ್ಮನ್ನು ಮನರಂಜಿಸಲು ಇದೇ ಡಿಸೆಂಬರ್ 14 ರಿಂದ 7.30ಕ್ಕೆ ನಿಮ್ಮ ಮುಂದೆ ಬರುತ್ತಿದೆ.
“ಸರಿಗಮಪ” ಸಿಂಗಿಂಗ್ ರಿಯಾಲಿಟಿ ಶೋ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ವೀಕ್ಷಿಸಿ ಜೀಕನ್ನಡ ವಾಹಿನಿ.


Leave a Reply

Your email address will not be published. Required fields are marked *