ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಅರಕೆರೆ ಗ್ರಾಮದ ಸಾರಿಗೆಹಳ್ಳಿ ಕೆರೆ ಮಧ್ಯಭಾಗದಲ್ಲಿರುವ ಶ್ರೀಅಭಯಾಂಜನೆಯಸ್ವಾಮಿ ದೇವಾಲಯದಲ್ಲಿ ಅದ್ದೂರಿಯಾಗಿ ವೈಭವದ ಹನುಮಜಯಂತಿ ಆಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಸಾವಿರಾರು ಮಂದಿ ಭಕ್ತರ ಸಮ್ಮುಖದೊಂದಿಗೆ ನೆರವೇರಿತು. ಮುಂಜಾನೆಯಿಂದಲೇ ಶ್ರೀಅಭಯ ಆಂಜನೇಯ ಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ಪೂಜಾ ಕೈಂಕರ್ಯಗಳು ನಡೆದವು.ಹನುಮ ಜಯಂತಿ ಆಚರಣೆಯ ಪ್ರಯುಕ್ತ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಮಧ್ಯಾಹ್ನದ ವೇಳೆಗೆ ಅನ್ನಸಂತರ್ಪಣೆ ಪ್ರಸಾದ ವಿನಿಯೋಗ ವಿತರಣೆಯನ್ನು ಹಮ್ಮಿಕೊಂಡಿದ್ದು, ಸಾವಿರಾರು ಜನ ಭಕ್ತರು ಶ್ರೀಅಭಯ ಆಂಜನೇಯ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸುವ ಮೂಲಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾಮಿಯ ಕೃಪೆಗೆ ಪಾತ್ರರಾದರು.ಕಾರ್ಯಕ್ರಮದಲ್ಲಿ ದೇವಾಲಯದ ಅರ್ಚಕರು, ದೇವಾಲಯದ ಸಮಿತಿಯವರು, ಸ್ಥಳೀಯ ಅರಕೆರೆ ಗ್ರಾಮದ ಮತ್ತು ಅಕ್ಕಪಕ್ಕದ ಹಳ್ಳಿಯ ಗ್ರಾಮಸ್ಥರು ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.-ಸಚಿನ್ ಮಾಯಸಂದ್ರ.